ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದರೆ ಅಲ್ಪಸಂಖ್ಯಾತರಿಗೆ 10000 ಕೋಟಿ: ಸಿದ್ದರಮಯ್ಯ ಘೋಷಣೆ


ದಾವಣಗೆರೆ:-

ದಾವಣಗೆರೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ಯೋಜನೆಗೆ ಸಂಬಂಧಿಸಿದ ಅನುದಾನವನ್ನು ಬಿಜೆಪಿ ಸರ್ಕಾರ ಕಡಿತಗೊಳಿಸಿದ್ದು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜೆಟ್ ನಲ್ಲಿ 10 ಸಾವಿರ ಕೋಟಿ ಅನುದಾನವನ್ನು ಇದಕ್ಕಾಗಿ ಮೀಸಲಿರಿಸಲಾಗುವುದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಇಲ್ಲಿನ ಹೈಸ್ಕೂಲ್ ಮೈದಾನದಲ್ಲಿ ಗುರುವಾರ ಸಂಜೆ ನಡೆದ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಮಾತನಾಡಿದರು. 2013 ರಲ್ಲಿ ಬಿಜೆಪಿ ಆಡಳಿತ ಇದ್ದಾಗ ಅಲ್ಪಸಂಖ್ಯಾತರ ಅಭಿವೃದ್ಧಿಗೆ 400 ಕೋಟಿ ಅನುದಾನವನ್ನು ನಿಗದಿ ಮಾಡಲಾಗಿತ್ತು. ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಅನುದಾನ ಹೆಚ್ಚಿಸಿ 3150 ಕೋಟಿ ಮೀಸಲಿರಿಸಲಾಗಿತ್ತು. ಈಗಿನ ಬಿಜೆಪಿ ಸರ್ಕಾರ ಅದನ್ನು1000 ಕೋಟಿಗೆ ಇಳಿಸಿದೆ ಎಂದು ಆರೋಪಿಸಿದರು.

ಈ ಮಾಹಿತಿ ನಿಮಗೆ ಇಷ್ಟವಾದಲ್ಲಿ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ.

Post a Comment

Previous Post Next Post

Smartwatch

Random Products