ಬೆಂಗಳೂರು:-
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮೈ ಕೊರೆಯುವ ಚಳಿಯಲ್ಲೂ ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಹೋರಾಟವನ್ನು ಮುಂದುವರಿಸಿದ್ದು, ಪ್ರತಿಭಟನೆಯು 2ನೇ ದಿನಕ್ಕೆ ಕಾಲಿಟ್ಟಿದೆ.
ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನಾ ಸ್ಥಳಕ್ಕೆ ಸರ್ಕಾರದ ಯಾರೊಬ್ಬ ಪ್ರತಿನಿಧಿಯೂ ಆಗಮಿಸದ ಹಿನ್ನೆಲೆಯಲ್ಲಿ ಕಾರ್ಯಕರ್ತರು ಅಹೋರಾತ್ರಿ ಧರಣಿ ಮುಂದುವರಿಸಿದ್ದಾರೆ.
ಚಳಿಯಲ್ಲೂ ಪ್ರತಿಭಟನೆಯಲ್ಲಿ ಭಾಗವಹಿಸಿರುವ ನೂರಾರು ಕಾರ್ಯಕರ್ತೆಯರು ಫ್ರೀಡಂ ಪಾರ್ಕ್ ನಲ್ಲಿ ರಾತ್ರಿಯಿಡಿ ನಿದ್ರೆ ಇಲ್ಲದೆ ತಂಗಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರ ಕನಿಷ್ಠ ವೇತನ, ಗ್ರಾಚ್ಯುಟಿ ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಕೆಗೆ ಒತ್ತಾಯಿಸಿ ನಾವು ಈ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದೇವೆ ಈ ಬಾರಿ ಸಂಬಂಧಪಟ್ಟ ಸಚಿವರು ಬಂದು ನಮ್ಮ ಸಮಸ್ಯೆಯನ್ನು ಬಗೆಹರಿಸುವ ತನಕ ನಮ್ಮ ಹೋರಾಟ ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಪ್ರತಿಭಟನಾ ಕಾರರು ಸ್ಪಷ್ಟಪಡಿಸಿದ್ದಾರೆ.
ಈ ಮಾಹಿತಿ ನಿಮಗೆ ಇಷ್ಟವಾದಲ್ಲಿ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ.
Tags:
Education News