ಶಿವಮೊಗ್ಗ:-
ಶಿವಮೊಗ್ಗ ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸರ್ಕಾರಿ ನೌಕರರ ವಿರುದ್ಧ ಸಲ್ಲದ ಆರೋಪ ಮಾಡುವ, ಸರ್ಕಾರಿ ಸೇವೆಗೆ ಅಡ್ಡಿಪಡಿಸುವ ಯಾವುದೇ ಸಮಾಜಘಾತಕ ವ್ಯಕ್ತಿ ಅಥವಾ ಶಕ್ತಿಗಳ ವರ್ತನೆಯನ್ನು ಸಹಿಸಲಾಗುವುದಿಲ್ಲ ಅದಕ್ಕೆ ಸಕಾಲದಲ್ಲಿ ಸೂಕ್ತ ಉತ್ತರ ನೀಡಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್ ಷಡಕ್ಷರಿ ಅವರು ಹೇಳಿದ್ದಾರೆ.
ಅವರು ಇತ್ತೀಚಿಗೆ ಸಾಗರ ತಾಲೂಕಿನ ಶಿಕ್ಷಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ತೆಲುಗು ಶಿಕ್ಷಕರ ವಿರುದ್ಧ ಆಧಾರ ರಹಿತವಾಗಿರುವ ಸುಳ್ಳು ಆರೋಪ ಮಾಡಿದ್ದಲ್ಲದೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಗಳನ್ನು ಅರಿಯಬಿಟ್ಟು ನೌಕರರಿಗೆ ಮಾನಸಿಕವಾಗಿ ನೋವು ಉಂಟು ಮಾಡುತ್ತಿರುವ ವ್ಯಕ್ತಿಗಳ ಚಟುವಟಿಕೆಗಳನ್ನು ಸಂಘಟನೆಯು ಗಂಭೀರವಾಗಿ ಪರಿಗಣಿಸಿದೆ. ಆರೋಪ ಮಾಡುವ ವ್ಯಕ್ತಿಗಳು ಸಂಬಂಧಿಸಿದ ಇಲಾಖೆ ಅಥವಾ ಸಂಬಂಧಿಸಿದ ಮೇಲಾಧಿಕಾರಿಗಳಲ್ಲಿ ದೂರು ನೀಡಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು. ತಪ್ಪು ಇದ್ದಲ್ಲಿ ಇಂತಹ ಕುಸ್ತಿಕ ಮನಸ್ಥಿತಿ ಹೊಂದಿರುವವರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಸಂಘಟನೆ ಸಕಾಲಿಕ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ಸಾಗರ ತಾಲೂಕಿನ ಶಿಕ್ಷಣ ಇಲಾಖೆಯಲ್ಲಿ ವಿವಿಧ ಕ್ಲಸ್ಟರ್ ಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮುಖ್ಯೋಪಾಧ್ಯಾಯರು, ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಬಿರುದು ಸುಳ್ಳು ಆರೋಪ ಮಾಡಿದ್ದಲ್ಲದೆ ಸಾಮಾಜಿಕ ಸ್ವಾಸ್ತ್ಯ ಹಾಳು ಮಾಡುತ್ತಿರುವ ವ್ಯಕ್ತಿಯೊಬ್ಬನ ವಿರುದ್ಧ ನೊಂದ ನೌಕರರು ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಲು ಈಗಾಗಲೇ ಸೂಚಿಸಲಾಗಿದೆ. ಈ ಬಗ್ಗೆ ಸಕ್ಷಮ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಕ್ರಮಕ್ಕೆ ಒತ್ತಾಯಿಸಲಾಗುವುದು. ನೌಕರರ ಮೇಲೆ ಇಲ್ಲ ಸಲ್ಲದ ಆರೋಪ ಮಾಡುವ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳನ್ನು ಹರಡುವ ವಿಕೃತ ಮನಸ್ಸಿನ ವ್ಯಕ್ತಿಗಳನ್ನು ಪೊಲೀಸ್ ಇಲಾಖೆ ಸೂಕ್ಷ್ಮವಾಗಿ ಗಮನಿಸಿ, ಪರಿಶೀಲಿಸಿ ಇಂತಹ ವ್ಯಕ್ತಿಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪೋಲೀಸ್ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಶಾಲಾ ಶಿಕ್ಷಕರು ಸೇರಿದಂತೆ ಸರ್ಕಾರದ ಬೇರೆ ಯಾವುದೇ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ನೌಕರರು ಇಂತಹ ಆರೋಪಗಳಿಂದ ಮಾನಸಿಕ ನೆಮ್ಮದಿಯನ್ನು ಕಳೆದುಕೊಳ್ಳದಿರುವಂತೆ ಹಾಗೂ ಸಂಘಟನೆಯು ತಮ್ಮ ನೆರವಿಕೆ ಸದಾ ಧವಿಸಲಿದೆ ತಿಳಿಸಿರುವ ಷಡಕ್ಷರಿ ಅವರು, ತಮ್ಮ ಕಾರ್ಯಕ್ಷೇತ್ರದಲ್ಲಿ ಸೌಲಭ್ಯಗಳಿಗಾಗಿ ಆಗಮಿಸುವ ಸಾರ್ವಜನಿಕರಿಗೆ ಉತ್ತಮ ಹಾಗೂ ತ್ವರಿತಗತಿಯ ಸೇವೆ ನೀಡುವಂತೆ ಮನವಿ ಮಾಡಿದ್ದಾರೆ.
ಈ ಮಾಹಿತಿ ನಿಮಗೆ ಇಷ್ಟವಾದಲ್ಲಿ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ ಧನ್ಯವಾದಗಳು.
ಮೊದಲು ನೆಟ್ಟಗೆ ಕನ್ನಡ ಪದಗಳನ್ನು ಬರೆಯುವುದನ್ನು ಕಲಿಯಪ್ಪ ವರದಿಗಾರನೆ...
ReplyDelete"ಅರಿಯಬಿಟ್ಟು", " ಬಿರುದು ಸುಳ್ಳು ಆರೋಪ", "ನೆರಿವಿಕೆ" "ಧವಿಸಲಿದೆ"...
ನಿನ್ ಕನ್ನಡಕ್ಕೊಂದಿಷ್ಟು ಬೆಂಕಿ ಹಾಕ...
ಸಾರ್ವಜನಿಕವಾಗಿ ಸುದ್ದಿ ನೀಡುವಾಗ ಭಾಷೆಯ ಬಗ್ಗೆ ಜ್ಣಾನವಿರಲಿ