ಮಡಿಕೇರಿ:-
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೊಡಗು ಪ್ರವಾಸದ ಸಂದರ್ಭ ಅವರ ಕಾರಿಗೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಗಡಿಪಾರು ಮಾಡಲು ಜಿಲ್ಲಾಡಳಿತ ಮುಂದಾಗಿದೆ.
ಮಡಿಕೇರಿ ನಗರಸಭೆಯ ನಾಮನಿರ್ದೇಶಿತ ಸದಸ್ಯ ಕವನ್ ಕಾವೇರಪ್ಪ ಮತ್ತು ಹಿಂದೂ ಯುವ ವಾಹಿನಿ ಜಿಲ್ಲಾ ಸಂಚಾಲಕ ವಿನಯ್ ಈ ಇಬ್ಬರಿಗೆ ಉಪ ವಿಭಾಗಾಧಿಕಾರಿಗಳ ನ್ಯಾಯಾಲಯದ ಮೂಲಕ ಶೋಕಾಸ್ ನೋಟೀಸ್ ಜಾರಿಗೊಳಿಸಿರುವ ಜಿಲ್ಲಾಡಳಿತ 'ನಿಮ್ಮನ್ನು ಯಾಕೆ ಗಡಿಪಾರು ಮಾಡಬಾರದು' ಎಂದು ಕಾರಣ ನೀಡುವಂತೆ ಸೂಚಿಸಿದೆ.
ಕೊಡಗು ಜಿಲ್ಲೆಯಲ್ಲಿ 2022ರ ಅಕ್ಟೋಬರ್ ತಿಂಗಳಲ್ಲಿ ಬಿದ್ದ ಮಳೆಯ ಹಾನಿ ವೀಕ್ಷಣೆಗಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೊಡಗು ಜಿಲ್ಲೆಗೆ ಆಗಮಿಸಿದ್ದ ವೇಳೆ ಜಿಲ್ಲಾ ಕೇಂದ್ರ ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಹಾಗೂ ಕುಶಾಲನಗರ ತಾಲೂಕಿನ ಗುಡ್ಡೆಹೊಸೂರಿನಲ್ಲಿ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆಯಲಾಗಿತ್ತು. ಇದು ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ರಾಜಕೀಯ ತಿಕ್ಕಾಟಕ್ಕೆ ಕಾರಣವಾಗಿತ್ತು.
0 Please Share a Your Opinion.: