ಆರೋಗ್ಯ ಸುದ್ದಿ:- ಚಳಿಗಾಲದಲ್ಲಿ ಆರೋಗ್ಯಕ್ಕೆ ಸಂಬಂಧಿಸಿದ ಹಲವು ಸಮಸ್ಯೆಗಳು ಕಾಡುತ್ತದೆಯಂತೆ. ಚರ್ಮ, ಕೂದಲು,ಶೀತ, ಕಫ, ಕೆಮ್ಮು, ಮುಂತಾದ ಸಮಸ್ಯೆಗಳು ಕಾಡುತ್ತದೆ. ಹಾಗಾಗಿ ಚಳಿಗಾಲದಲ್ಲಿ ಉತ್ತಮ ಆಹಾರವನ್ನು ಸೇವಿಸಿ. ಆದರೆ ಚಳಿಗಾಲದಲ್ಲಿ ಮೊಟ್ಟೆಯನ್ನು ಸೇವಿಸುವುದು ಪ್ರಯೋಜನಕಾರಿಯೇ..? ಎಂಬುದನ್ನು ತಿಳಿಯಿರಿ.
ಮೊಟ್ಟೆಯಲ್ಲಿ ಪ್ರೋಟೀನ್ ಸಮೃದ್ಧವಾಗಿದೆ. ಇದು ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಮೊಟ್ಟೆಯಲ್ಲಿ ವಿಟಮಿನ್ ಬಿ6, ಬಿ12 ಹೊಂದಿರುತ್ತದೆ. ಇದು ದೇಹಕ್ಕೆ ಶಕ್ತಿ ನೀಡುತ್ತದೆಯಂತೆ.
ಮೊಟ್ಟೆಯಲ್ಲಿ ವಿಟಮಿನ್ ಡಿ ಮತ್ತು ಸತುವು ಇದೆ. ಇದು ಮೂಳೆಗಳನ್ನು ಗಟ್ಟಿಗೊಳಿಸುತ್ತದೆ. ಹಾಗಾಗಿ ಚಳಿಗಾಲದಲ್ಲಿ ಕೀಲು ನೋವಿನ ಸಮಸ್ಯೆ ಕಾಡುವುದಿಲ್ಲ. ಹಾಗೇ ಇದು ಕೂದಲನ್ನು ಬಲಗೊಳಿಸುತ್ತದೆ. ಇದರಿಂದ ಕೂದಲುದುರುವ ಸಮಸ್ಯೆ ಕಾಡುವುದಿಲ್ಲ. ಹಾಗಾಗಿ ಚಳಿಗಾಲದಲ್ಲಿ ದಿನಕ್ಕೆ 2 ಮೊಟ್ಟೆಗಳನ್ನು ಬೇಯಿಸಿ ತಿನ್ನಿ.
Tags:
Health Tips