{ads}

ರಾಜ್ಯದ ಎಲ್ಲಾ ಶಾಲೆಗಳಲ್ಲಿ ನಾಳೆ 'ಡಾ. ಬಿ. ಆರ್ ಅಂಬೇಡ್ಕರ್ ಜಯಂತಿ' ಆಚರಣೆ ಕಡ್ಡಾಯ : ರಾಜ್ಯ ಸರ್ಕಾರ ಆದೇಶ



ರಾಜ್ಯದಲ್ಲಿ ಶೈಕ್ಷಣಿಕ ವರ್ಷ ಇದೇ ತಿಂಗಳು(ಏಪ್ರಿಲ್) 10ರಂದು ಮುಕ್ತಾಯಗೊಂಡಿದ್ದು, ಆದ್ರೆ, 14ರಂದು 'ಡಾ. ಬಿ. ಆರ್ ಅಂಬೇಡ್ಕರ್ ಜಯಂತಿಯಿದ್ದು, ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಫ್ರೌಢ ಶಾಲೆಗಳಲ್ಲಿ ಜಯಂತಿ ಆಚರಿಸುವಂತೆ ರಾಜ್ಯ ಸರ್ಕಾರ ತಿಳಿಸಿದೆ.


ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ, ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಫ್ರೌಢ ಶಾಲೆಗಳಲ್ಲಿ ಮುಖ್ಯ ಶಿಕ್ಷಕರು, ಶಿಕ್ಷಕರು, ಸಿಬ್ಬಂದಿಗಳು, ಎಸ್‍ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ವಿದ್ಯಾರ್ಥಿಗಳು ಸಹಿಭಾಗಿತ್ವದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಿಸುವಂತೆ ಎಲ್ಲಾ ಶಾಲಾ ಮುಖ್ಯಸ್ಥರಿಗೆ, ಕ್ಷೇತ್ರ ಶಿಕ್ಷಾಣಧೀಕರಿಗಳಿಗೆ, ಉಪ ನಿರ್ದೇಶಕರಿಗೆ ತಿಳಿಸಿದೆ.

Tags

Post a Comment

0 Comments
* Please Don't Spam Here. All the Comments are Reviewed by Admin.